Select Page

Advertisement

ನಾವಗೆ ಅಗ್ನಿ ದುರಂತ ; ಜಿಲ್ಲಾಡಳಿತಕ್ಕೆ ಮಾನವ ಹಕ್ಕುಗಳ ಆಯೋಗದಿಂದ “ ಮಾನವೀಯತೆ ಪಾಠ ”

ನಾವಗೆ ಅಗ್ನಿ ದುರಂತ ; ಜಿಲ್ಲಾಡಳಿತಕ್ಕೆ ಮಾನವ ಹಕ್ಕುಗಳ ಆಯೋಗದಿಂದ “ ಮಾನವೀಯತೆ ಪಾಠ ”

ಬೆಳಗಾವಿ : ಮೃತರ ಕುಟುಂಬಕ್ಕೆ ಅಂಬ್ಯುಲೆನ್ಸ್ ಮೂಲಕ ಮೃತ ದೇಹ ಹಸ್ತಾಂತರಿಸಬೇಕು. ಇಂತಹ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಣೆ ಜೊತೆಗೆ ಮಾನವೀಯತೆ ಮರೆಯಬಾರದು. ಸರ್ಕಾರದ ಮಾರ್ಗಸೂಚಿ ಪ್ರಕಾರ ಮೃತದೇಹ ಹಸ್ತಾಂತರಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಸೂಚನೆ ನೀಡಿದರು.

ಅಗ್ನಿ ದುರಂತ ನಡೆದಿದ್ದ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.

ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಿಲ್ಲ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಗೌರವಪೂರ್ವಕವಾಗಿ ಹಸ್ತಾಂತರಿಸಿರುವ ಕುರಿತು ಸ್ಪಷ್ಟನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಕಾರ್ಖಾನೆಯ ಅಗ್ನಿ ದುರಂತದ ಪ್ರಕರಣದ ಕುರಿತು ಪತ್ರಿಕೆಗಳಲ್ಲಿ ಸಾಕಷ್ಟು ಭಿನ್ನವಾದ ಅಭಿಪ್ರಾಯಗಳು ಪ್ರಕಟವಾಗಿವೆ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳ ಆಯೋಗದದಿಂದ ನಿಖರವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಸ್ಪಷ್ಟ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಈ ಪ್ರಕರಣದಲ್ಲಿ ಎಲ್ಲ ಅಧಿಕಾರಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ದಾರೆ. ಅಗ್ನಿದುರಂತದಲ್ಲಿ ಮೃತ ಪಟ್ಟಿರುವ ವ್ಯಕ್ತಿಯ ದೇಹದ ಅವಶೇಷಗಳನ್ನು ಮಡಿಕೆಯಲ್ಲಿ ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವಿವರಿಸಿದರು.

ಸಂಬಂಧಿಸಿದ ಅಧಿಕಾರಿಗಳು ಅಗ್ನಿ ದುರಂತದ ಕುರಿತು ಸ್ಪಷ್ಟ ತನಿಖಾ ಕಾರ್ಯ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಸಂಭವಿಸಿದಲ್ಲಿ ತಾಲ್ಲೂಕು ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ನೇರ ಹೊಣೆಯಾಗಿತ್ತಾರೆ. ಹಾಗಾಗಿ ಮೃತ ದೇಹವನ್ನು ಕುಟುಂಬಗಳಿಗೆ ಗೌರವಪೂರ್ವಕವಾಗಿ ಹಸ್ತಾಂತರಿಸಬೇಕು. ಮಾನವ ಹಕ್ಕುಗಳು ಉಲ್ಲಂಗಣೆಯಾಗದಂತೆ ನೋಡಿಕೊಂಡು ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಬೆಳಗಾವಿ ತಹಶೀಲ್ದಾರ್ ಬಸವರಾಜ ನಾಗರಾಳ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸೂರ್ಯನಾರಾಯಣ ಭಟ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!