
ಬಿಜೆಪಿ ತೆಕ್ಕೆಗೆ ಹಾರೂಗೇರಿ ಪುರಸಭೆ

ಹಾರೂಗೇರಿ : ಮೊದಲನೇ ಅವಧಿಗೆ ನಡೆದ ಚುನಾವಣೆಯಲ್ಲಿ ಹಾರೂಗೇರಿ ಪುರಸಭೆ ಬಿಜೆಪಿ ತೆಕ್ಕೆಗೆ ಬಂದಿದ್ದು, ನೂತನ ಅಧ್ಯಕ್ಷರಾಗಿ ವಸಂತ ಲಾಳಿ ಹಾಗೂ ಉಪಾಧ್ಯಕ್ಷರಾಗಿ ಬಸವರಾಜ ಅರಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
23 ಸದಸ್ಯ ಬಲದ ಹಾರೂಗೇರಿ ಪುರಸಭೆಯಲ್ಲಿ ಬಿಜೆಪಿ – 15, ಕಾಂಗ್ರೆಸ್ – 07 ಮತ್ತು ಓರ್ವ ಪಕ್ಷೇತರ ಅಭ್ಯರ್ಥಿ ಚುನಾಯಿತರಾಗಿದ್ದರು. ಬಹುಮತ ಹೊಂದಿದ್ದ ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ ಅ ವರ್ಗಕ್ಕೆ ವಸಂತ ಲಾಳಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿಗೆ ಸೇರಿರುವ ಬಸವರಾಜ ಅರಕೇರಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ವಸಂತ ಲಾಳಿ ಮಾತನಾಡಿ. ಪಕ್ಷಾತೀತವಾಗಿ ಎಲ್ಲ ಸದಸ್ಯ ಬಳಗವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಜಿ ಶಾಸಕ ಪಿ.ರಾಜೀವ ಅವರ ಮಾರ್ಗದರ್ಶನದಲ್ಲಿ ಹಾರೂಗೇರಿ ಪುರಸಭೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತೇನೆ ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪಿ.ರಾಜೀವ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶುಭಾಶಯ ತಿಳಿಸಿ ಮಾತನಾಡಿ. ಜನರ ಋಣ ನಿಮ್ಮ ಮೇಲಿದೆ ಅದನ್ನ ಮರೆಯದೆ ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ, ನ್ಯಾಯೋಚಿತವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣ ಕವಾಗಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಅಭಿಷೇಕ ಪಾಂಡೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಕುಡಚಿ ಮಂಡಲ ಅಧ್ಯಕ್ಷ ಶ್ರೀಧರ ಮೂಡಲಗಿ, ಪುರಸಭೆಯ ಸರ್ವ ಸದಸ್ಯರು, ಚುನಾವಣಾ ಸಿಬ್ಬಂದಿಗಳು, ಪುರಸಭೆಯ ಸಿಬ್ಬಂದಿಗಳು, ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.