Select Page

Advertisement

ಅಥಣಿ : ಮದುವೆ ಹಿಂದಿನ ದಿನ ಪ್ರಾಣಬಿಟ್ಟ ಯುವಕ ; ಕಣ್ಣೀರಲ್ಲಿ ಕುಟುಂಬ

ಅಥಣಿ : ಮದುವೆ ಹಿಂದಿನ ದಿನ ಪ್ರಾಣಬಿಟ್ಟ ಯುವಕ ; ಕಣ್ಣೀರಲ್ಲಿ ಕುಟುಂಬ

ಅಥಣಿ : ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ವಿವಾಹದ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಯುವಕನಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲಿ ಮೃತಪಟ್ಟಿರುವ ಧಾರಣ ಘಟನೆ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಆರ್.ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಸಂಬಂಧಿಕರು ಹಾಗೂ ಕುಟುಂಬಸ್ಥರು ಸೆಪ್ಟೆಂಬರ್ 5ರಂದು ಮದುವೆಗೆ ದಿನಾಂಕ ನಿಗದಿ ಮಾಡಿದ್ದರು, ಮದುವೆಯ ಕಾರ್ಯಕ್ರಮದ ತಯಾರಿಯಲ್ಲಿದ್ದ ಯುವಕ ಮನೆ ಮುಂದೆ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡಿದ್ದ, ಸ್ನೇಹಿತನ ಜೊತೆಗೆ

ಮದುವೆ ಕೆಲಸದ ಬಗ್ಗೆ ದೂರವಾಣಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲಿ ಕುಸಿದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯ ಸಂಭವಿಸಿದೆ‌‌.

ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮಂಗಳವಾರ ರಾತ್ರಿ ಎಂಟು ಗಂಟೆ ಆಸುಪಾಸಿನಲ್ಲಿ ಮನೆ ಮುಂದೆ ಮದುವೆ ಪೂರ್ವ ಸಿದ್ಧತೆಯ ತಯಾರಿ ನಡೆಸಿದ್ದ ಹಠಾತ್ತನೆ ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದ

ಪರಿಣಾಮವಾಗಿ ಕುಟುಂಬಸ್ಥರು ತುರ್ತಾಗಿ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರು ಯುವಕನ ಪ್ರಾಣ ಪಕ್ಷಿ ಆವಾಗಲೇ ಹಾರಿ ಹೋಗಿತ್ತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!