Select Page

Advertisement

ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ನಿಷೇಧ

ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ನಿಷೇಧ

ಬೆಳಗಾವಿ : ಗಣೇಶ ಮೂರ್ತಿಗಳ ವಿಸರ್ಜನೆ ಪ್ರಯುಕ್ತ ಸೆ.16 ರಂದು ಸಂಜೆ 6 ಗಂಟೆಯಿಂದ ಸೆ.18 ರ 6 ಗಂಟೆವರೆಗೆ ಬೆಳಗಾವಿ ತಾಲೂಕಿನಾದ್ಯಂತ ಮಧ್ಯದ ಅಂಗಡಿ, ವೈನಶಾಪ್,‌ ಬಾರ್‌ಗಳು, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಲಾಗಿದೆ.

ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು, ಹೊಟೇಲ್‌ಗಳಲ್ಲಿರುವ ಬಾರ್‌ಗಳನ್ನು ಮುಚ್ಚಲು ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅದೇಶವನ್ನು ಹೊರಡಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ
ಕಲಂ 21(2)

ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶ ಹೊರಡಿಸಿದ್ದಾರೆ.

ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು‌ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!