ನ.18 ರಂದು ಬೃಹತ್ ಪ್ರತಿಭಟನೆ – ಆನಂದ ಶಿಗೇಹಳ್ಳಿ
ಬೆಳಗಾವಿ : ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಧೋರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನ.18 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಅಧ್ಯಕ್ಷ ಆನಂದ ಶಿಗೇಹಳ್ಳಿ ಹೇಳಿದರು.
ಬುಧವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೆಲವು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಮಾರ್ಗಸೂಚಿ ಅನ್ವಯ ಸರಿಯಾದ ರೀತಿಯಲ್ಲಿ ಔಷಧ ಇರುವುದಿಲ್ಲ. ಇದರ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಮಾತ್ರ ಬಗೆ ಹರಿದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಬಸವರಾಜ ಇಂಗಳಿ, ಅಮೃತ ಮಜ್ಜಗಿ, ಮಲ್ಲಿಕಾರ್ಜುನ ಸಕ್ರಿ, ಲಕ್ಷ್ಮೀ ಕಣ್ಣೂರ, ಕುಮಾರ ಕಂಬಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.