ಬೆಳಗಾವಿ : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿಗೆ ಬೆಚ್ಚಿದ ಗ್ರಾಮ ಲೆಕ್ಕಾಧಿಕಾರಿ
ಬೆಳಗಾವಿ : ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿಯಿಂದ ಸರ್ಕಾರಿ ಅಧಿಕಾರಿಗಳು ಕಂಗಾಲಾಗಿದ್ದಾರೆ.
ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆಲ ತಿಂಗಳ ಹಿಂದೆ ಕೋಟ್ಯಾಂತರ ರೂ. ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ ರಾಮದುರ್ಗದ ಬಳಿ ಬೆಳಗಾವಿ ಪೊಲೀಸರ ಕೈಗೆ ಲಾಕ್ ಆಗಿದ್ದರು. ಸಧ್ಯ ಇವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಹತ್ವ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಅಷ್ಟೇ ಅಲ್ಲದೆ ಸವದತ್ತಿ ತಾಲೂಕಿನ ಉಗರಗೋಳದಲ್ಲಿರುವ ಧಾರವಾಡ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದಪ್ಪ ಭಜಂತ್ರಿ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಮಹತ್ವದ ದಾಖಲೆ ಪರಿಶೀಲನೆ ನಡೆಸಿದೆ. ಒಟ್ಟಿನಲ್ಲಿ ಬೆಳಗಾವಿಯ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿಯಿಂದ ಭ್ರಷ್ಟ ಕುಳಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.


