Select Page

Advertisement

ಮೀನು ಹಿಡಿಯಲು ಹೋಗಿ ನೀರು ಪಾಲಾದ ಮೂವರು

ಮೀನು ಹಿಡಿಯಲು ಹೋಗಿ ನೀರು ಪಾಲಾದ ಮೂವರು

ಚಿಕ್ಕೋಡಿ:ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ನೀರು ಪಾಲಾಗಿರುವ ಘಟನೆ ಭಾನುವಾರ ಸಂಜೆ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆನಕನಹೊಳಿ ಗ್ರಾಮದ ಲಕ್ಷ್ಮಣರಾಮ ಅಂಬಲಿ(49), ಇವರ 14 ವರ್ಷದ ಮತ್ತು 12 ವರ್ಷದ ಇಬ್ಬರು ಪುತ್ರರು ನೀರಿನಲ್ಲಿ ಮುಳುಗಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ಮೀನಿನ ಬಲೆ ಹಾಕಲು ನದಿಗಿಳಿದಾಗ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆಯಿಂದ ಮೂವರಿಗಾಗಿ ಎನ್​​ಡಿಆರ್​ಎಫ್ ತಂಡದಿಂದ ಶೋಧ ಕಾರ್ಯ ಮುಂದುವರಿದಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!