
ಹಾರೂಗೇರಿ : ಭೀಕರ ರಸ್ತೆ ಅಪಘಾತ ; ಬೈಕ್ ಸವಾರನ ಸ್ಥಿತಿ ಗಂಭೀರ

ರಾಯಬಾಗ : ಹಾರೂಗೇರಿ – ಹಿಡಕಲ್ ಮುಖ್ಯ ರಸ್ತೆ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬುಧವಾರ ಮಧ್ಯಾಹ್ನ ಹಾರೂಗೇರಿಯಿಂದ ಮುಗಳಖೋಡಕ್ಕೆ ಹೊರಟಿದ್ದ ಬೈಕ್ ಸವಾರ ವೇಗದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದ್ದು, ಸವಾರ ಹಾಗೂ ಹಿಂದೆ ಕುಳಿತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಇಬ್ಬರನ್ನೂ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕು.