
ಮಹಾರಾಷ್ಟ್ರ ಸಿಎಂ ಜೊತೆ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ

ಬೆಳಗಾವಿ : ಗಡಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಸಿಂದೆ ಜೊತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದು ಈ ಕುರಿತು ತಮ್ಮ ಫೇಸ್ಬುಕ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು, ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ. ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇರುವುದರಿಂದ ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು