ರಾಯಬಾಗ ಕಿರಾತಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್..!
ಬೆಳಗಾವಿ : ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಅಜೀತ್ ಪಾಟೀಲ ( 27 ) ಆರೋಪಿಗೆ 20. ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.
ಆರೋಪ ಸಂತೋಷ್ ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಕೆ.ಎಸ್ ಹಟ್ಟಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾದೀಶೆ ಸಿ.ಎಮ್ ಪುಷ್ಪಲತಾ ಅವರು ಆರೋಪಿತನಗಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡವಿಧಿಸಿದೆ. ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಿದೆ. ಸರ್ಕಾರದ ಪರವಾಗಿ ಎಲ್.ವ್ಹಿ ಪಾಟೀಲ್ ವಾದ ಮಂಡಿಸಿದ್ದರು.