ಬೆಳಗಾವಿ : ನೇಣು ಬಿಗಿದುಕೊಂಡು ಎಎಸ್ಐ ಆತ್ಮಹತ್ಯೆಗೆ ಶರಣು
ಬೆಳಗಾವಿ : ಐಗಿಳಿ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಶಂಭು ಮೆತ್ರಿ (50) ಮೃತ ದುರ್ದೈವಿ. ಸ್ವಗ್ರಾಮ ಅನಂತಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


