ಸಿ.ಟಿ ರವಿ ಬಂಧನ ; ಸಿಡಿದೆದ್ದ ಹಿಂದೂ ಸಂಘಟನೆಗಳಿಂದ ಬಂದ್ ಗೆ ಕರೆ
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಕಾಂಗ್ರೆಸ್ ಸರ್ಕಾರ ಬಂಧನ ಖಂಡಿಸಿ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ.
ಚಿಕ್ಕಮಗಳೂರು ನಗರದಲ್ಲಿ ಸಿ.ಟಿ ರವಿ ಬಂಧನ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ.
ಸಿ.ಟಿ ರವಿ ಬಂಧನ ಖಂಡಿಸಿ ಶುಕ್ರವಾರ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಗರದ ಬಾರ್ ಬಂದ್ ಮಾಡಿ ಬಂದ್ ಗೆ ಸಿದ್ದತೆ ಕೈಗೊಳ್ಳಲಾಗಿದೆ.
ಇನ್ನೂ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರನ್ನು ಬಂಧಿಸಿ ಖಾನಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಜೊತೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


