ಅಧಿಕಾರಿಗಳ ಕಾರ್ಯಕ್ಷಮತೆ ವಿಷಯದಲ್ಲಿ ಸಮುದಾಯ ತರುವುದು ಸರಿಯಲ್ಲ : ಸಚಿವ ಹೆಚ್.ಕೆ ಪಾಟೀಲ
ಬೆಳಗಾವಿ : ಬೆಳಗಾವಿ ಚಳಿಗಾಲ ಅಧಿವೇಶನ ವೇಳೆ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗೆ ನಗದು ಬಹುಮಾನ ನೀಡಿರುವ ಕುರಿತು ಕೆಟ್ಟ ವಿಚಾರ ಇಟ್ಟುಕೊಂಡು ಯತ್ನಾಳ್ ಸಮುದಾಯಗಳನ್ನು ಮಧ್ಯ ತಂದು ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಹೆಚ್.ಕೆ ಪಾಟೀಲ ಅಭಿಪ್ರಾಯಪಟ್ಟರು.
ಅಧಿವೇಶನ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಸಿಇಎನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್ ಗಡ್ಡೇಕರ್ ಅವರಿಗೆ ನಗದು ಬಹುಮಾನ ಘೋಷಣೆ ವಿಚಾರಕ್ಕೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದರು.
ಈ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು.
ಪೊಲೀಸರ ಕಾರ್ಯಕ್ಷಮತೆ ಕುರಿತು ಕೆಟ್ಟ ವಿಚಾರ ಇಟ್ಟುಕೊಂಡು ಸಮುದಾಯ ನಡುವೆ ತಂದು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ಧ ಹರಿಹಾಯ್ದರು.
ಜೋಶಿ ಹತಾಶೆ ಹೇಳಿಕೆ : ಸಿ.ಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯಪಟ್ಟರು.
ಸಿ.ಟಿ ರವಿ ಅವರನ್ನು ಪೊಲೀಸರು ನಕಲಿ ಎನ್‌ಕೌಂಟರ್ ಮಾಡುವ ಉದ್ದೇಶದಲ್ಲಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಸಿ.ಟಿ ರವಿ ಬಂಧನದ ವಿಚಾರವಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಕೀಳು ಮಟ್ಟದ ಹೇಳಿಕೆ ನೀಡುವುದು ಪ್ರಹ್ಲಾದ್ ಜೋಶಿ ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದರು.
ಗಾಂಧಿಜಿ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ತಯಾರಿ ನಡೆಯುತ್ತಿವೆ. ಈ ಕುರಿತು ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿರುವೆ ಎಂದು ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯಪಟ್ಟರು.


