ಬೆಳಗಾವಿಗೆ ಬಂದಿದ್ದ ಕಾಂಗ್ರೆಸ್ ಸಂಸದ ಆಸ್ಪತ್ರೆಗೆ ದಾಖಲು
ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿ ಸಭೆಗೆ ಬಂದಿದ್ದ
ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅನಾರೋಗ್ಯದ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿ ಮಹಾಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಅವರು ಮುಖ್ಯಮಂತ್ರಿಗಳ ಜೊತೆಗಿದ್ದರು.


