ಸಿಎಂ ಭೇಟಿಮಾಡಿದ ಪವರ್ ಪುಲ್ ನಾಯಕರು – ಏನಾಯ್ತು ಮಾತುಕತೆ ?
ಬೆಳಗಾವಿ : ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವ ಮಾಜಿ ಸಚಿವ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ಈಶ್ವರಪ್ಪ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದರು. ಸಿಎಂ ಕರೆ ಮಾಡಿದ ನಂತರ ಬೆಳಗಾವಿಗೆ ಆಗಮಿಸಿದ ಇವರು, ಸಿಎಂ ಜೊತೆ ಚರ್ಚಿಸಿದ್ದಾರೆ.
ಒಟ್ಟಾರೆಯಾಗ ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್ ಈಶ್ವರಪ್ಪ ಸಚಿವಸ್ಥಾನ ಪಡೆದುಕೊಳ್ಳುವ ಲಕ್ಷಣ ಕಂಡುಬರುತ್ತಿದೆ.