
ಸಿ.ಟಿ ರವಿಗೆ ಸಂಕಷ್ಟ ; ಅಶ್ಲೀಲ ಪದಬಳಕೆ ಮಾಡಿದ್ದು ದೃಢ

ಬೆಂಗಳೂರು : ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ( Laxmi hebbalkar ) ವಿರುದ್ಧ ಸಿ.ಟಿ ರವಿ ( C.T Ravi ) ಅಶ್ಲೀಲ ಪದಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಸಿ.ಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಕರಣವನ್ನು ಸಿಒಡಿ ತನಿಖೆ ಒಪ್ಪಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ (DAPR) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ.
ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದಬಂದಿದೆ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.
ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.