
ಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳಗಾವಿ : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿ ನಗರದ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಟಾರ ( 61 ) ಮೃತ ದುರ್ದೈವಿ. ಪ್ರಯಾಗರಾಜ್ ನಿಂದ ಮುಂಬೈ ಮಾರ್ಗವಾಗಿ ಬೆಳಗಾವಿಗೆ ಬರುವ ವೇಳೆ ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬುಧವಾರ ನಡೆದ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ಮೃತಪಟ್ಟಿದ್ದು, ಹೃದಯಾಘಾತದಿಂದ ಓರ್ವ ವ್ಯಕ್ತಿ ಸೇರಿ ಐವರು ಮೃತಪಟ್ಟಿದ್ದಾರೆ.