
ಅತ್ತ ಕುಂಭಮೇಳದ ಕುರಿತು ಖರ್ಗೆ ಲೇವಡಿ ; ಇತ್ತ ಡಿಕೆಶಿ ಪುಣ್ಯಸ್ನಾನ

ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿಗಳು ಭಾಗವಹಿಸಿ ಪುಣ್ಯಸ್ನಾನ ಮಾಡಿದ್ದಾರೆ.
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಜೊತೆಯಲ್ಲೇ ಡಿಕೆಶಿ ದಂಪತಿ ಮಹಾಕುಂಭಮೇಳದಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು.
ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು ಡಿಕೆಶಿ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ ಮಾಡಿದರು. ಬಳಿಕ ನೊಣವಿಕೆರೆ ಅಜ್ಜಯ್ಯ ಆಶೀರ್ವಾದ ಪಡೆದರು. ಇದೇ ವೇಳೆ ಕುಂಭಮೇಳದಲ್ಲಿದ್ದ ಸಾಧು-ಸಂತರ ಆಶೀರ್ವಾದವನ್ನು ಡಿಕೆಶಿ ಪಡೆದುಕೊಂಡರು. ಅಧ್ಯಾತ್ಮದ ಕುರಿತು ಸಂತರೊಟ್ಟಿಗೆ ಚರ್ಚೆ ನಡೆಸಿದರು.