
ಬೆಳಗಾವಿಯಲ್ಲಿ ಅಮಾನುಷ ಘಟನೆ ; ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಹೆರಿಗೆ

ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲೆ ದುರುಳರು ಅತ್ಯಾಚಾರ ಎಸಗಿದ್ದು ಗಂಡು ಮಗುವಿಗೆ ಜನ್ಮ ನೀಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಹೌದು ಮೂಡಲಗಿ ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾಲ್ವರು ದುರುಳರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸಧ್ಯ ಬಾಲಕಿ ಆಸ್ಪತ್ರೆ ಒಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಘಟನೆ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿಯಲ್ಲಿ ಫೆ. 7 ರಂದು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.