Select Page

Advertisement

ಬಬಲಾದಿ ಜಾತ್ರೆಗೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿ ; ಇಬ್ಬರು ಸಾವು

ಬಬಲಾದಿ ಜಾತ್ರೆಗೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿ ; ಇಬ್ಬರು ಸಾವು

ಬೆಳಗಾವಿ : ಬಬಲಾದಿ ಸದಾಶಿವ ಮುತ್ಯಾನ ಜಾತ್ರೆಗೆ ತೆರಳಿ ವಾಪಸ್ ಬರುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ‌ ಜನರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಹಾಗೂ ಮುನ್ಯಾಳ ಕಿನಾಲ್ ಬಳಿ ಘಟನೆ ನಡೆದಿದೆ. ಟ್ರ್ಯಾಕ್ಟರ್ ಟೈಲರ್ ನಲ್ಲಿ 25 ಕ್ಕೂ ಹೆಚ್ಚು ಜನ ಬಬಲಾದಿಗೆ ತೆರಳಿದ್ದರು ಎನ್ನಲಾಗಿದ್ದು ಟೈಲರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಮೂಡಲಗಿಯ ವೆಂಕಟೇಶ ಆಸ್ಪತ್ರೆಯ ವೈದ್ಯ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!