ತಡರಾತ್ರಿ ಠಾಣೆಗೆ ಬಂದ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ : ಹಿಂದೂಪರ ಕಾರ್ಯಕರ್ತರ ವಿರುದ್ಧ ಪೊಲೀಸರು ಅನವಶ್ಯಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಭಗರಂಗದಳ ಕಾರ್ಯಕರ್ತರು ಶಹಾಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಹಾಪೂರ ಠಾಣಾ ವ್ಯಾಪ್ತಿಯ ಶ್ರೀರಾಮ ಕೋಟೆ, ಮನೋಜ ಹಲಗೇಕರ್ ಎಂಬುವವರು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲಾಗುತ್ತಿದೆ ಎಂದು ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಅಶ್ವತ್ಥಾಮ ಮಂದಿರ ಮೇಲೆ ಕಲ್ಲು ಎಸೆತದ ಬಗ್ಗೆ ಪೊಲೀಸ ಕಮಿಷನರ್ ಮನವಿ ಸಲ್ಲಿಸಲಾಗಿತ್ತು. ಅದೇ ಉದ್ದೇಶ ಇಟ್ಟುಕೊಂಡು ಭಜರಂಗದಳ ಇಬ್ಬರು ಕಾರ್ಯಕರ್ತರ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ.
ದೇಶದ ಪರವಾಗಿ ಭಜರಂಗದಳ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಭಜರಂಗದಳದ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಕೇಸ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು.


