Select Page

Advertisement

ಬೆಳಗಾವಿ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಳಗಾವಿ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಳಗಾವಿ : ವಸತಿ ನಿಲಯದಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ‌ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ರಾಮನಗರದಲ್ಲಿರುವ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೇಲ್ ನಲ್ಲಿ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಪ್ರಜ್ವಲ್ ಕುಪ್ಪಾನಟ್ಟಿ(20)ಎಂದು ಗುರುತಿಸಲಾಗಿದೆ.

ಪ್ರಜ್ವಲ್ ನಿನ್ನೆ ಕಾಲೇಜಿಗೆ ಹೋಗದೆ ತನ್ನ ರೂಮಿನಲ್ಲಿಯೇ ಇದ್ದ ಎನ್ನಲಾಗಿದೆ. ಸಂಜೆ ಸ್ನೇಹಿತ ಬಂದು ರೂಮಿನ ಬಾಗಿಲು ಬಡಿದಾಗ ಪ್ರಜ್ವಲ್ ಬಾಗಿಲು ತೆಗೆದಿರಲಿಲ್ಲ. ಕಿಟಕಿಯಿಂದ ನೋಡಿದಾಗ ಪ್ರಜ್ವಲ್ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಜ್ವಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಭಾಗ ತಾಲೂಕಿನ ಭಾವನಸೌಂದತ್ತಿ ಗ್ರಾಮದ ನಿವಾಸಿಯಾಗಿರೋ ಪ್ರಜ್ವಲ್ ಬೆಳಗಾವಿಯ ಇಂಜಿನೀಯರಿಂಗ್ ಕಾಲೇಜು ಒಂದರಲ್ಲಿ ಪ್ರಜ್ವಲ್ ವ್ಯಾಸಾಂಗ ಮಾಡುತ್ತಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ರವಾಣಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!