Select Page

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರಿಗೆ ಗುದ್ದಿದ್ದ ಆರೋಪಿ ಬಂಧನ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರಿಗೆ ಗುದ್ದಿದ್ದ ಆರೋಪಿ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೆ ಕಾರಣವಾಗಿದ್ದ ಚಾಲಕನ್ನು ಬಂಧಿಸಿ ಲಾರಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಜನೆವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್ ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕ ಮಧುಕರ ಕೊಂಡಿರಾಮ ಸೋಮವಂಶಿ ಎಂಬಾತನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣದ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಚಾಲಕ‌ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.‌ ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿದಂತೆ ಹಲವು ಸಾಕ್ಷಿಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ‌ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!