ಅಥಣಿ : 625 ಕ್ಕೆ 595 ಅಂಕ ಪಡೆದ ಅಮೃತಾ ಪಾಟೀಲ್
ಅಥಣಿ : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ನದಿ ಇಂಗಳಗಾಂವ ಸರಕಾರಿ ಪ್ರೌಡ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅಮೃತಾ ಪ್ರಕಾಶ್ ಪಾಟೀಲ 10 ನೇ ತರಗತಿ ಪರೀಕ್ಷೆಯಲ್ಲಿ 625 ಕ್ಕೆ 595 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.


