ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ರೈತನ ಮಗಳು ; ವಿದ್ಯಾರ್ಥಿನಿ ಸಾಧನೆಗೆ ಬಹುಮಾನ ಘೋಷಣೆ
ಬೆಳಗಾವಿ : 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯದ 22 ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ ವಿದ್ಯಾರ್ಥಿನಿ ಸೇರಿದ್ದಾರೆ.
ದೇವಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿ ಸಾಧನೆಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ 5 ಸಾವಿರ ರೂ. ಬಹುಮಾನ ಘೋಷಣೆ ಮಾಡಿದ್ದಾರೆ. ಸಂಘಟನೆ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನಿಸುವುದಾಗಿ ಹೇಳಿದ್ದಾರೆ.


