Select Page

Advertisement

ದರೂರ ಸರಕಾರಿ ಶಾಲೆ ವಿದ್ಯಾರ್ಥಿಗಳ ಅಭೂತಪೂರ್ವ ಸಾಧ‌ನೆ

ದರೂರ ಸರಕಾರಿ ಶಾಲೆ ವಿದ್ಯಾರ್ಥಿಗಳ ಅಭೂತಪೂರ್ವ ಸಾಧ‌ನೆ

ಬೆಳಗಾವಿ: ರಾಜ್ಯಾದ್ಯಂತ ಬಹುನಿರೀಕ್ಷಿತ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಪ್ರಮುಖವಾಗಿ ಖಾಸಗಿ ಶಾಲೆಗಳಿಗೆ ಪೈಪೋಟಿ ಎನ್ನುವಂತೆಯೇ ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯ ಮೂಲಕ ಉತ್ತಮ ಅಂಕಗಳನ್ನು ಪಡೆಯುವುದರ ದಾಖಲೆ ಸೃಷ್ಟಿಸಿರುವುದು ವಿಶೇಷವಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ದರೂರ ಗ್ರಾಮದಲ್ಲಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ತಮ್ಮ ಛಲ, ಹಠ ಹಾಗೂ ಸಾಧನೆಯ ತುಡಿತದಿಂದ ನಿರಂತರವಾಗಿ ಓದುವುದರ ಜೊತೆಗೆ ನಾವ್ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

ಶಾಲಾ ಮಟ್ಟದಲ್ಲಿ ಶೇಕಡಾ. 94.4 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಮಗದುಮ್ಮ ಕನ್ನಡ ವಿಷಯದಲ್ಲಿ 125ಕ್ಕೆ 124, ಹಿಂದಿ ವಿಷಯದಲ್ಲಿ 99 ಅಂಕಗಳನ್ನು ಬಾಚಿಕೊಂಡಿದ್ದಾಳೆ, ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡಿರುವ ಕಾವೇರಿ ತಳವಾರ ಶೇಕಡಾ.92.8 ಹಾಗೂ ತೃತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ಮೇಘಾ ಖುರ್ದ್ ಶೇಕಡಾ. 91.5 ಹಾಗೂ ಸಮಾಜ ವಿಜ್ಞಾನ ವಿಭಾಗದಲ್ಲಿ 100ಕ್ಕೆ 100 ಅಂಕಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಇನ್ನೂ ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲಾ ಸುಧಾರಣಾ ಸಮಿತಿ (ಎಸ್ ಡಿ ಎಂ ಸಿ) ಶಿಕ್ಷಕ ವರ್ಗ ಸೇರಿದಂತೆ ಗ್ರಾಮಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇನ್ನೂ ನಮ್ಮ ಈ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಹಾಗೂ ಕುಟುಂಬದವರ ಪ್ರೋತ್ಸಾಹವೇ ಕಾರಣ ಎನ್ನುವುದು ವಿದ್ಯಾರ್ಥಿನಿಯರ ಸಂತಸವಾಗಿದೆ.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರ ನಡುವೆಯೇ ಇದ್ದು ಈ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಖಾಸಗಿ ಶಾಲೆಗಳಿಗೂ ಟಕ್ಕರ್ ನೀಡುವ ಮೂಲಕ ಸರ್ಕಾರಿ ಶಾಲೆಗಳ ಕುರಿತು ಜನರಿಗಿರುವ ದುರಾಲೋಚನೆ, ತಪ್ಪು ಕಲ್ಪನೆಯನ್ನು ದೂರ ಮಾಡಲು ಪ್ರಯತ್ನಿಸಿರುವುದು ನಿಜಕ್ಕೂ ಶ್ಲಾಘನೀಯ.

Advertisement

Leave a reply

Your email address will not be published. Required fields are marked *

error: Content is protected !!