ಭೀಕರ ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು
ಬೈಲಹೊಂಗಲ : ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ (26), ಉಮೇಹೈಮಾನ ಸೈಯ್ಯದ (22), ಒಂದು ವರ್ಷದ ಮಗು ಅಹ್ಮದ ಸೈಯ್ಯದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಆಯಿಷಾ ಸೈಯ್ಯದ (18) ಹಾಗೂ ಇನ್ನೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ.ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದು ಬಂದಿದೆ.
ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ರವಾಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


