ಕುರಾನ್ ಗ್ರಂಥಕ್ಕೆ ಬೆಂಕಿ ಇಟ್ಟ ಪ್ರಕರಣ ; ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು
ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿ ಕುರಾನ್ ಕದ್ದೊಯ್ದು ಪಕ್ಕದ ಜಮೀನಿನಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದಾರೆ.
ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶಿಲ್ದಾರ ನೇತೃತ್ವದ ತನಿಖಾ ತಂಡ ಸಂತಿಬಸ್ತವಾಡ ಗ್ರಾಮಕ್ಕೆ ಭೇಟಿನೀಡಿ ತನಿಖೆ ಕೈಗೊಂಡಿದೆ. ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿದ್ದ ಹಿನ್ನಲೆಯಲ್ಲಿ ಸರಕಾರ ಪ್ರಕರಣವನ್ನು ಸಿಐಡಿ ಹೆಗಲಿಗೆ ನೀಡಿತ್ತು.
ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಗಳ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ಸಂಘಟನೆ ಸದಸ್ಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


