
ಹಿರಿಯ ಪತ್ರಕರ್ತ ಮಹಬೂಬ್ ಮಕಾಂದರ್ ಅವರಿಗೆ “ಕನ್ನಡ ನುಡಿಶ್ರೀ” ಪ್ರಶಸ್ತಿ

ಬೆಳಗಾವಿ : ನಾಗನೂರು ರುದ್ರಾಕ್ಷಿ ಮಠದ ಲಿಂಗೈಕ್ಯ ಕಾಯಕಯೋಗಿ ಡಾ.ಶಿವಬಸವ ಮಹಾಸ್ವಾಮಿಗಳ 134 ನೆಯ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಬೆಳಗಾವಿಯ ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಗಟ್ಟಿ ಧ್ವನಿ ಮಹೆಬೂಬ್ ಮಕಾಂದರ್ ಅವರಿಗೆ ಕನ್ನಡ ನುಡಿಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ಕಳೆದ ಮೂರು ದಶಕಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಮಹಬೂಬ್ ಮಕಾಂದರ್ ಯಾವತ್ತೂ ಕನ್ನಡಪರವಾದ ಗಟ್ಟಿ ಧ್ವನಿ ಎಂದೇ ಖ್ಯಾತಿ ಹೊಂದಿದ್ದಾರೆ. ಯಾವುದೇ ಜಾತಿ ಬೇಧವಿಲ್ಲದೆ ಸಮಾಜಪರ ಕಾರ್ಯ ಗುರುತಿಸಿ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಡಿಸೆಂಬರ್ 5 ರಿಂದ 8 ರವರೆಗೆ ನಾಗನೂರು ರುದ್ರಾಕ್ಷಿ ಮಠದ ಲಿಂಗೈಕ್ಯ ಕಾಯಕಯೋಗಿ, ಮಹಾಪ್ರಸಾದಿ, ಡಾ.ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿ
ಮಹೋತ್ಸವ ಆಚರಿಸಲಾಗುತ್ತಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಗದುಗಿನ ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಜಿವರ
ಸನ್ನಿಧಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ನೇತೃತ್ವವನ್ನು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಯವರು ವಹಿಸಲಿದ್ದಾರೆ.
ಬೆಳಗಾವಿ ಶಿವಬಸವ ನಗರದಲ್ಲಿರುವ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಜರುಗಲಿದೆ. ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಲಿದ್ದು ಸಾನಿಧ್ಯವನ್ನು ಬೆಳಗಾವಿ ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿಯವರು ವಹಿಸಲಿದ್ದು ಅಧ್ಯಕ್ಷತೆಯನ್ನು ಹುಕ್ಕೇರಿ ವಿರಕ್ತಮಠದ ಶ್ರೀ.ಶಿವಬಸವ
ಮಹಾಸ್ವಾಮಿಜಿಯವರು ಭಾಗವಹಿಸಲಿದ್ದಾರೆ.
ಮಠದಿಂದ ಕೊಡ ಮಾಡಲಾಗುವ “ಕನ್ನಡ ನುಡಿಶ್ರೀ” ಪ್ರಶಸ್ತಿಯನ್ನು ನಿಪ್ಪಾಣಿಯ ಶ್ರೀ.ಮಿಥುನ್ ಅಂಕಲಿ , ಅಥಣಿಯ ಚನ್ನಯ್ಯ ಹಿಟ್ನಾಳಮಠ, ಬೆಳಗಾವಿಯ ಮಹಬೂಬ್ ಮಕಾಂದರ್, ಸಂಕ್ ಗ್ರಾಮದ ಶ್ರೀ.ಆರ್. ಜಿ. ಬಿರಾದರ್ ಅವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.