ಬೆಳಗಾವಿಯಲ್ಲಿ ವ್ಯಾಪಕ ಮಳೆ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ : ಬೆಳಗಾವಿ ನಗರ ಸೇರಿದಂತೆ ಖಾನಾಪುರ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆ ಹಿನ್ನಲೆಯಲ್ಲಿ ಜೂನ್ 25 ರಂದು ಆಯ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ನಗರ ಪ್ರದೇಶದಲ್ಲಿ ನಿರಂತರ ಮಳೆ ಸುರಿತುತ್ತಿರುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ನದಿಯಂತಾಗಿವೆ. ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಚರಂಡಿ ನೀರು ಮನೆಗಳಿಗೆ ನುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ವ್ಯಾಪಕ ಮಳೆ ಹಿನ್ನಲೆಯಲ್ಲಿ ಜೂನ್ 25 ರಂದು ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


