ಚಂಡಮಾರುತದ ಪೀಡಿತ ತಮಿಳುನಾಡಿಗೆ ಅಗತ್ಯ ಸಾಮಗ್ರಿ ಕಳುಹಿಸಿದ ಬಿಜೆಪಿ
ಬೆಳಗಾವಿ : ಭೀಕರ ಮಿಚಾಂಗ್ ಚಂಡಮಾರುತದ ಆರ್ಭಟಕ್ಕೆ ನಲುಗಿ ಸಂಕಷ್ಟ ಪೀಡಿತವ ತಮಿಳುನಾಡಿನ ಜನರಿಗೆ ಬಿಜೆಪಿ ಕಛೇರಿಯಿಂದ ಆಹಾರ ಸಾಮಗ್ರಿಗಳು ಹಾಗೂ ಅಗತ್ಯ ದಿನಬಳಕೆ ವಸ್ತುಗಳನ್ನು ತಮಿಳುನಾಡಿಗೆ ಕಳುಹಿಸಲಾಯುತು.
ಮಂಗಳವಾರ ಬೆಳಗಾವಿ ಮಹಾನಗರ ಬಿಜೆಪಿ ಕಚೇರಿಯಿಂದ ಅಗತ್ಯ ವಸ್ತುಗಳನ್ನು ತುಂಬಿದ ಲಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರಿಗೆ ಭೀಕರ ಚಂಡಮಾರುತಕ್ಕೆ ತುತ್ತಾದ ತಮಿಳುನಾಡು ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಅಲ್ಲಿನ ಜನರ ಪರವಾಗಿ ನಿಲ್ಲುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬೆಳಗಾವಿ ನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ, ಶಾಸಕರಾದ ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ, ಪ್ರಭು ಚೌಹಾಣ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


