ಅಂಗನವಾಡಿ ಬಂದ್ ಮಾಡಿ ವಿವಿಧ ಬೇಡಿಕೆಗಳಿಗೆ ಕಾರ್ಯಕರ್ತರ ಒತ್ತಾಯ
ಅಥಣಿ : ಕೇಂದ್ರ ಸರ್ಕಾರ ದೇಶದಲ್ಲಿ ಜಾರಿಗೆ ತಂದಿರುವ ಕಾರ್ಮಿಕ ಕಾನೂನು ನೀತಿಯನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತಾಲೂಕಿನ ನೂರಾರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು , ಆಶಾ ಕಾರ್ಯಕರ್ತೆಯರು, ಹಾಗೂ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ನೌಕರರು ತಾಲೂಕಾಡಳಿತದ ಶಕ್ತಿ ಕೇಂದ್ರ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಐ ಎಸ್ ಪಾಟೀಲ ಮಾತನಾಡಿ ಕೇಂದ್ರ ಸರ್ಕಾರ ಅಂಗನವಾಡಿಗಳಲ್ಲಿ ಎಫ್ ಆರ್ ಎಸ್ ಕಡ್ಡಾಯವಾಗಿ ಜಾರಿಗೊಳಿಸುವಂತೆ ನಿರ್ದೇಶನ ನೀಡಿದ್ದು, ಆದರೆ ಮಕ್ಕಳ ಮುಖ ಗುರ್ತಿಸುವ ವ್ಯವಸ್ಥೆಗೆ ಅನೇಕ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ಮತ್ತು ಇಂಟರ್ನೆಟ್ ವ್ಯವಸ್ಥೆ ಇರುವುದಿಲ್ಲ, 5ಜಿ ಸಾಮರ್ಥ್ಯ ಹೊಂದಿದ ಮೊಬೈಲ್ ಮತ್ತು ಸಿಮ್ ಗಳು ಒದಗಿಸದೇ ಎಫ್ ಆರ್ ಎಸ್ ಜಾರಿಗಾಗಿ ಅಂಗನವಾಡಿ ನೌಕರರ ಮೇಲೆ ತುಂಬಾ ಒತ್ತಡ ಹೇರಲಾಗುತ್ತಿದೆ.
ಇದರಿಂದ ಅನೇಕ ಅಂಗನವಾಡಿ ನೌಕರರು ಮಾನಸಿಕ ನೋವು ಅನುಭವಿಸುತ್ತಿದ್ದಾರೆ. ಈ ಯೋಜನೆಯನ್ನು ಹೇಗೆ ಸಫಲತೆ ಮಾಡುವುದು ಚಿಂತೆಯಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಈ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕು ಇಲ್ಲವೇ ಕಡ್ಡಾಯ ಮಾಡಿರುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಕಳೆದ ಇವತ್ತು ವರ್ಷಗಳಿಂದ ಐ ಸಿ ಡಿ ಎಸ್ ಅಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಈ ಯೋಜನೆಯ ಕಾಯಂಗೊಳಿಸಬೇಕು, ಈ ಯೋಜನೆಯನ್ನು ಆದರಿಸಿ ಪಡಿತರ ಸಾಮಗ್ರಿಗಳನ್ನು ನಿಲ್ಲಿಸಬಾರದು.
ಕೇಂದ್ರ ಸರ್ಕಾರದ ಈ ಧೋರಣೆಯ ವಿರುದ್ಧ ಅಂಗನವಾಡಿ ನೌಕರರ ಸಂಘ ಹೋರಾಟ ನಡೆಸುತ್ತಿದ್ದು, ದೇಶದಲ್ಲಿ 29 ಕಾರ್ಮಿಕ ಕಾನೂನುಗಳನ್ನ ರದ್ದುಗೊಳಿಸಿ ಹೊಸದಾಗಿ ಜಾರಿಗೆ ತಂದಿರುವ ನಾಲ್ಕು ಸoಹಿತೆಗಳನ್ನು ಜಾರಿಗೆ ತರುವ ಮೂಲಕ ಅಂಗನವಾಡಿ ನೌಕರರು ನಡೆಸುತ್ತಿರುವ ಹೋರಾಟವನ್ನು ಹಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ನಾವು ಇಂದು ಅಂಗನವಾಡಿಗಳು ಕೇಂದ್ರಗಳನ್ನ ಬಂದ್ ಮಾಡಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.
ಬೇಡಿಕೆಗೆ ಸ್ಪಂದಿಸದಿದ್ದರೆ ಸಚಿವರ ಮನೆ ಮಂದಿ ಧರಣಿ :
ಕೇಂದ್ರ ಮತ್ತು ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿದ ಇದ್ದರೆ ಸಚಿವರ ಮನೆ ಮುಂದೆ ವಿತರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಸರ್ಕಾರ ಎಫ್ ಆರ್ ಎಸ್ ನ್ನು ಕಡ್ಡಾಯಗೊಳಿಸಬಾರದು, 26,000 ಕನಿಷ್ಠ ವೇತನ, 10 ಸಾವಿರ ಮಾಸಿಕ ಪಿಂಚಣಿ ಕೊಡಬೇಕು, ಗುಜರಾತ್ ಮಾದರಿಯಲ್ಲಿ ಅಂಗನವಾಡಿ ನೌಕರರನ್ನು ಕಾಯಂಗಗೊಳಿಸಬೇಕು. ಐಸಿಡಿಎಸ್ ಯೋಜನೆಗೆ ಬಜೆಟ್ ಹೆಚ್ಚಿಸಬೇಕು, ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ವೈಫೈ ವ್ಯವಸ್ಥೆ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಹಾಗೂ ಸಹಾಯಕ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಐ ಎಸ್ ಪಾಟೀಲ ಸರ್ಕಾರವನ್ನು ಒತ್ತಾಯಿಸಿದರು.
ತಾಲೂಕಾ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಮಹಾಬುಬ್ ತರತರಿ ಮಾತನಾಡಿ ಕೇಂದ್ರ ಸರ್ಕಾರ ಅನೇಕ ಒತ್ತಡಗಳನ್ನು ಇರುವ ಮೂಲಕ ರಾಜ್ಯದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಪೊರೇಟ್ ಬಂಡವಾಳ ಶಾಹಿಗಳಿಗೆ ಮಣಿ ಹಾಕುತ್ತಿದೆ. 2019 ಹಾಗೂ 2020 ರಲ್ಲಿ ಪಾರ್ಲಿಮೆಂಟ್ ನಲ್ಲಿ ಅಂಗೀಕರಿಸಿದ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತೊಂದರೆ ತನ್ನ ಪ್ರಭಾವವನ್ನ ಕಳೆದುಕೊಳ್ಳುವ ಭಯದಲ್ಲಿದ್ದು, ಈ ಕಾರ್ಮಿಕ ಕಾನೂನುಗಳಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರುವ ತೆರೆಮನೆಯ ಪ್ರಯತ್ನ ನಡೆಯುತ್ತಿವೆ. ಇದರಿಂದ ರಾಜ್ಯದ ಬಹು ಸಂಖ್ಯೆಯ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು , ಹಾಗೂ ದುಡಿಯುವ ಜನರು ಕಾನೂನುಗಳ ರಕ್ಷಣೆಯಿಂದ ಹೊರಗೊಡೆಯುತ್ತಾರೆ. ಈಗಾಗಲೇ ಉದ್ಯೋಗದಲ್ಲಿರುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸಂಭವ ಹೆಚ್ಚಾಗಿದೆ.
ಆದ್ದರಿಂದ ಈ ಕಾನೂನುಗಳಿಗೆ ತಿದ್ದುಪಡಿ ಮಾಡಬಾರದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಹೊರಗುತ್ತಿಗೆಯ ನೌಕರರು, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಅಥಣಿ ತಾಲೂಕ ಸಮಿತಿಯ ಎಲ್ಲಾ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಉದ್ಯೋಗದಲ್ಲಿರುವ ಕಾರ್ಮಿಕರಿಗೆ ಮಾರಕವಾಗಿರುವ ಈ ಕಾರ್ಮಿಕ ಕಾನೂನು ನೀತಿಯನ್ನು ಕೈ ಬಿಡಬೇಕೆಂದು ಅಗ್ರಹಿಸಿದರು. ನಂತರ ತಾಲೂಕ ತಹಶೀಲ್ದಾರ್ ಸಿದರಾಯ ಬೋಸಗಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ,
ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮಂಜುನಾಥ್ ಅವರಿಗೆ ಪ್ರತ್ಯೇಕ ಮನವಿ ಪತ್ರಗಳನ್ನು ನೀಡುವ ಮೂಲಕ ತಮ್ಮ ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ ಎಸ್ ತೇಲಿ, ಅಮೃತಾ ಡಂಗಿ , ಸಂಗೀತ ನಾಟಿಕಾರ್ ಸೇರಿದಂತೆ ನೂರಾರು ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ
ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ನೌಕರರು ಅಥಣಿ ಪಟ್ಟಣದ ಹೊರವಲಯದ ಮಿನಿವಿಧಾನಸೌಧದ ಮುಂಭಾಗದಲ್ಲಿ ಜೆವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಸ್ಥಳಕ್ಕೆ ತಹಸೀಲ್ದಾರ ಸಿದರಾಯ ಬೋಸಗಿ, ಅಥಣಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಸಿಡಿಪಿಓ ಮಂಜುನಾಥ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನಾಕಾರರು ಮನವಿ ಪತ್ರಗಳನ್ನು ಸ್ವೀಕರಿಸಿದರು. ನಂತರ ರಸ್ತೆ ಸಂಚಾರವನ್ನು ಸುಗಮಗೊಳಿಸಿದರು


