ಸಾವಿಗೆ ರಹದಾರಿಯಾದ ಹಾರೂಗೇರಿ ಮುಖ್ಯರಸ್ತೆ : ನಿದ್ರೆಗೆ ಜಾರಿದ ಪೊಲೀಸರು..!
ಬೆಳಗಾವಿ : ಪ್ರತಿದಿನ ಸಾವಿರಾರು ವಾಹನಗಳು ಓಡಾಡುವ ಹಾರೂಗೇರಿ ಪಟ್ಟಣದ ಅಥಣಿ – ಗೋಕಾಕ್ ಮುಖ್ಯರಸ್ತೆ ಅಕ್ಷರಶಃ ಸಾವಿನ ಹರದಾರಿಯಾಗಿದೆ. ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಮಾಡುತ್ತಿದ್ದು, ಕೂದಲೆಳೆ ಅಂತರದಲ್ಲಿ ಪೊಲೀಸ್ ಠಾಣೆ ಇದ್ದರೂ ಯಾವುದೇ ಪ್ರಯೋಜನವಿಲ್ಲ.
ಹೌದು ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಹಾರೂಗೇರಿ ಪಟ್ಟಣದಲ್ಲಿ ವಿಪರೀತವಾಗಿ ವಾಹನ ದಟ್ಟಣೆಯಾಗುತ್ತಿದೆ. ಅಥಣಿ ಗೋಕಾಕ್ ಮುಖ್ಯ ರಸ್ತೆ ಪಕ್ಕದಲ್ಲಿ ಅಂಗಡಿ ಮುಗ್ಗಟ್ಟು ಸೇರಿದಂತೆ ವಾಹನಗಳ ಪಾರ್ಕಿಂಗ್ ಆಗುತ್ತಿದ್ದರು ಯಾರೂ ಹೇಳುವವರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಖ್ಯ ರಸ್ತೆಯಲ್ಲಿ ದೊಡ್ಡ ಗಾತ್ರದ ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ರಸ್ತೆ ಪಕ್ಕದಲ್ಲಿ ಬೈಕ್ ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ದೊಡ್ಡ ಅನಾಹುತಕ್ಕೆ ಹರದಾರಿಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಪರ್ಯಾಸ.


