Select Page

Advertisement

ಶೀಘ್ರದಲ್ಲೇ 17000 ಶಿಕ್ಷಕರ ನೇಮಕ ; ಸಚಿವರಿಂದ ಬಿಗ್ ಅಪ್ಡೇಟ್…!

ಶೀಘ್ರದಲ್ಲೇ 17000 ಶಿಕ್ಷಕರ ನೇಮಕ ; ಸಚಿವರಿಂದ ಬಿಗ್ ಅಪ್ಡೇಟ್…!

ಚಿತ್ರದುರ್ಗ : ರಾಜ್ಯದಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆಯುವ ಕನಸು ಕಂಡಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಗ್ಗೆ ಮಾಹಿತಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣ ಶಾಲಾ ಶಿಕ್ಷಣ ಇಲಾಖೆಗೆ ಭಾರಿ ಸಂಖ್ಯೆಯಲ್ಲಿ ಶಿಕ್ಷಕರ ನೇಮಕ ನಡೆಯಲಿದೆ. ಈಗಾಗಲೇ ಇದಕ್ಕೆ ಸರ್ಕಾರ ಅನುಮೋದನೆ ನೀಡಿದ್ದು 17000 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿರುವ ಅವರು ಈ ಬಾರಿ ಕೇವಲ 4 ತಿಂಗಳ ಅವಧಿಯಲ್ಲಿ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ರಾಜ್ಯದ 16,000 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳನ್ನು ನೀಡಲಾಗುವುದು ಎಂದೂ ಹೇಳಿದ್ದಾರೆ.

ರಾಜ್ಯ ಶಿಕ್ಷಣ ನೀತಿಯ ಕರಡು ವರದಿ ಸಲ್ಲಿಕೆಯಾಗಿದೆ. ಅದರಲ್ಲಿರುವ ಲೋಪಗಳನ್ನು ಪರಿಶೀಲಿಸಲು ಉಪ ಸಮಿತಿ ರಚನೆ ಮಾಡಿ ಬಳಿಕ ಅನುಷ್ಠಾನ ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ 307 ಕರ್ನಾಟಕ ಪಬ್ಲಿಕ್‌ ಶಾಲೆಗಳು (ಕೆಪಿಎಸ್‌) ಕಾರ್ಯನಿರ್ವಹಿಸುತ್ತಿವೆ. ಇನ್ನು ಇದೇ ವರ್ಷ ರಾಜ್ಯ ಸರ್ಕಾರವು 500 ಕೆಪಿಎಸ್‌ ಶಾಲೆಗಳನ್ನು 15 ದಿನದೊಳಗಾಗಿ ಘೋಷಣೆ ಮಾಡಲಿದೆ. ಹೈದರಾಬಾದ್‌ ಕರ್ನಾಟಕ ಭಾಗದಲ್ಲಿಯೂ 100 ಕೆಪಿಎಸ್‌ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್‌ ಶಾಲೆಗಳು ಶುರುವಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನಾವು ಒಪ್ಪಲ್ಲ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಇದರಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ. ಮಕ್ಕಳಿಗೆ ಉತ್ತಮವಾದ ಕ್ರೀಡಾಂಗಣವಿಲ್ಲ, ಶಾಲಾ ಆವರಣಕ್ಕೆ ಹೊಂದಿಕೊಂಡಿರುವಂತೆ ನಾಲ್ಕು ಎಕರೆ ಜಾಗದಲ್ಲಿ ಉತ್ತಮ ಕ್ರೀಡಾಂಗಣ, ಶಾಲೆಗೆ ವಾಹನ ಸೌಲಭ್ಯ, ಹಿಂದುಳಿದ ವರ್ಗದ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಲು ಮನವಿ ಕೂಡ ಸಲ್ಲಿಸಲಾಯಿತು.

ಕೆಲ ತಿಂಗಳ ಹಿಂದೆ ಶಿಕ್ಷಕರ ನೇಮಕಾತಿ ಬಗ್ಗೆ ಮಾತನಾಡಿದ್ದ ಮಧು ಬಂಗಾರಪ್ಪ ಅವರು, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಘೋಷಿಸಿದ್ದಾರೆ. ಇದರ ಜೊತೆಗೆ ಒಟ್ಟಾರೆ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದಿದ್ದರು.

ಪದವಿ ಪೂರೈಸಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (ಪಿಎಸ್‌ಟಿ) ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ (ಜಿಪಿಟಿ) ಪದೋನ್ನತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು. ನಂತರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದ್ದರು. ಪದೋನ್ನತಿ ನೀಡುವ ಕುರಿತು ಶಿಕ್ಷಣ ಇಲಾಖೆಯು ಸೂಕ್ತ ನಿರ್ಧಾರ ತೆಗೆದುಕೊಂಡಿದೆ.

ಇದಕ್ಕಾಗಿ ಕಾನೂನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಭಿಪ್ರಾಯ ಸಹ ಪಡೆಯಲಾಗುತ್ತಿದೆ. ಇದಕ್ಕೆ ಸಿಎಂ ಕೂಡ ಒಪ್ಪಿದ್ದಾರೆ. ಈ ಬಗ್ಗೆ ಅಂತಿಮವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದೂ ಹೇಳಿದ್ದರು.

Advertisement

Leave a reply

Your email address will not be published. Required fields are marked *

error: Content is protected !!