ಎಚ್ಚರ….ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು
ಚಿಕ್ಕೋಡಿ : ಮಹಾರಾಷ್ಟ್ರದ ಜಲಾಶಯಗಳಯ ಭರ್ತಿ ಹಿನ್ನೆಲೆಯಲ್ಲಿ ಕೊಯ್ತಾ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣ ಮತ್ತೆ ಹೆಚ್ಚಳ ಮಾಡಲಾಗಿದ್ದು ಕೊಯ್ತಾ ಜಲಾಶಯದಿಂದ 1 ಲಕ್ಷ ಕ್ಯೂಸೆಕನಷ್ಟು ಸಾವಿರ ನೀರು ಬಿಡುಗಡೆ ಮಾಡಿದ್ದು,ಚಿಕ್ಕೋಡಿಯ ನದಿಗಳಿಗೆ ನೀರು ಮತ್ತಷ್ಟು ಹೆಚ್ಚಾಗಲಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು ಕ್ಷಣ ಕ್ಷಣಕ್ಕೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ ಹೆಚ್ಚಾಗುತ್ತಿದೆ. ಭಾರಿ ಮಳೆಯಿಂದ ಮಹಾರಾಷ್ಟ್ರದ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ ಬಿಡಲಾಗುತ್ತಿದೆ. ಚಿಕ್ಕೋಡಿ ಉಪವಿಭಾಗದ ಕೃಷ್ಣಾ ದೂದಗಂಗಾ, ವೇದಗಂಗಾ ನದಿ ತೀರಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಜಲಾಶಯಗಳಯ ಭರ್ತಿ ಹಿನ್ನೆಲೆಯಲ್ಲಿ ಕೊಯ್ತಾ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣ ಮತ್ತೆ ಹೆಚ್ಚಳ ಮಾಡಲಾಗಿದ್ದು ಕೊಯ್ತಾ ಜಲಾಶಯದಿಂದ 1 ಲಕ್ಷ ಕ್ಯೂಸೆಕನಷ್ಟು ನೀರು, ವಾರಣಾ ಜಲಾಶಯದಿಂದ 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ರಾಧಾ ನಗರಿ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಾಗೂ ಕಾಳಮ್ಮವಾಡಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ನಾಳೆ ಹೊತ್ತಿಗೆ ರಾಜ್ಯಕ್ಕೆ ಬಾರಿ ಪ್ರಮಾಣದ ಮಹಾರಾಷ್ಟ್ರದ ನೀರು ಹರಿದು ಬರುವ ಸಾಧ್ಯತೆಯಿದೆ. ಸಧ್ಯ ಕೃಷ್ಣಾ ನದಿಗೆ 99 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದು ಜಲಾಶಯಗಳ ನೀರು ಸೇರಿದರೇ 1 ಲಕ್ಷ 75 ಸಾವಿರ ಕ್ಯೂಸೆಕ್ ದಾಟುವ ಸಾಧ್ಯತೆ ಇದೆ. ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಹಿನ್ನಲೆಯಲ್ಲಿ ನೀರು ಬಿಡುಗಡೆ ಪ್ರಮಾಣವನ್ನ ಮಹಾರಾಷ್ಟ್ರ
ಸರಕಾರ ಹೆಚ್ಚಿಸಿದೆ ಆಲಮಟ್ಟಿ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ರಾಜ್ಯದ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು ಪ್ರವಾಹ ನಿರ್ವಹಣೆಗೆ ಹರಸಾಹಸ ಪಡುತ್ತಿದ್ದಾರೆ.


