ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಬೆಳಗಾವಿ : ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಸಂಭ್ರಮಾಚರಣೆ ಜೋರಾಗಿದೆ. ಮನೆ, ಮನಗಳಲ್ಲಿ ಗಣೇಶನ ಸ್ಮರಣೆ ಜೋರಾಗಿದೆ. ಹಾಗೆಯೇ ಬೆಳಗಾವಿ ಜಿಲ್ಲಾಧಿಕಾರಿ ಸಂಭ್ರಮದಿಂದ ಹಬ್ಬದ ಆಚರಣೆ ಮಾಡಿದ್ದಾರೆ.
ಹೌದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ವಿಶೇಷ ಏನೆಂದರೆ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಪರಿಸರ ಸ್ನೇಹಿ ಗಣೇಶನ ಕುರಿತು ಜಾಗೃತಿ ಮೂಡಿಸಿದರು.

