ವೈದ್ಯರ ನಿರ್ಲಕ್ಷ್ಯ ; ಬಾಣಂತಿ ಸಾವು
ಬೆಳಗಾವಿ : ಇಲ್ಲಿನ ವಂಟಮೂರಿ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಹೆಣ್ಣು ಮಗುವಿಗೆ ಜನ್ಮ ನೀಡಿ ನಿಖಿತಾ ಮಾದರ ಬಾಣಂತಿ ಮೃತಪಟ್ಟಿದ್ದಾಳೆ. ಶುಕ್ರವಾರ ಹೆರಿಗೆಗೆ ಎಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಮೂಲಕ ಸಿಜರಿಯನ್ ಮಾಡಬೇಕೆಂದು ವಂಟಮೂರಿ ಸರಕಾರಿ ಹೆಸರಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದ ವೈದ್ಯರು ಹೆಸರಿಗೆ ಮಾಡಿದ ಬಳಿಕ ನಿಖಿತಾ ಮೃತಪಟ್ಟಿದ್ದಾಳೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಏಕಾಏಕಿ ಹೆರಿಗೆ ನೋವು ಆರಂಭವಾಗಿರುವುದರಿಂದ ವಂಟಮೂರಿ ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆಸ್ಪತ್ರೆಯ ಮುಂಭಾಗದಲ್ಲಿ ನ್ಯಾಯಕ್ಕಾಗಿ ಹಸಗುಸು ಸಮೇತ ಪೋಷಕರ ಧರಣಿ ನಡೆಸಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಗೆ ಸಿಜರಿನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ಪೊಲೀಸರನ್ನು ಕರೆಸಿದ ವೈದ್ಯರು.
ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ನಿಖಿತಾ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಹಸುಗುಸ ಸಮೇತ ಪೋಷಕರ ಪ್ರತಿಭಟನೆ ನಡೆಸಿ ಸಿಜರಿನ್ ಮಾಡಿದ ವೈದ್ಯ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ.


