ಬೆಳಗಾವಿ ; ದಾಖಲೆ ನಿರ್ಮಿಸಿದ ಗಣೇಶೋತ್ಸವ ಮೆರವಣಿಗೆ : ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ..!
ಬೆಳಗಾವಿ : ಈ ಬಾರಿ ಬೆಳಗಾವಿ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತೊಂದು ಐತಿಹಾಸಿಕ ಮೈಲುಗಲ್ಲು ನಿರ್ಮಿಸಿದೆ. 36 ಗಂಟೆಗಳ ಕಾಲ ವಿಸರ್ಜನಾ ಮೆರವಣಿಗೆ ಸುಸೂತ್ರವಾಗಿ ನೆರವೇರಿದೆ.
350 ಕ್ಕೂ ಅಧಿಕ ಸಾರ್ವಜನಿಕ ಗಣೇಶ ಮೂರ್ತಿಗಳು ಬೆಳಗಾವಿ ನಗರದ ವಿವಿಧೆಡೆ ವಿಸರ್ಜನೆಗೊಂಡಿವೆ. ನಿರಂತರವಾಗಿ 36 ಗಂಟೆ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ನೆರವೇರಿದ್ದು ಹೊಸ ಮೈಲುಗಲ್ಲು ರಚಿತವಾಗಿದೆ.
ಅತೀ ಸೂಕ್ಷ್ಮ ಪ್ರದೇಶ ಸೇರಿದಂತೆ ನಗರದ ವಿವಿಧೆಡೆ ಯಾವುದೇ ಒಂದು ಸಣ್ಣ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಭದ್ರತೆ ನೀಡಿತ್ತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಪೊಲೀಸರು ಗಣೇಶ ವಿಸರ್ಜನಾ ಮೆರವಣಿ ಭದ್ರತೆ ನೋಡಿಕೊಂಡರು.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ : ಯಾವುದೇ ಅಹಿತಕರ ಘಟನೆ ಸೇರಿದಂತೆ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಈ ಬಾರಿ ಬೆಳಗಾವಿ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ನಡೆಯಲು ಪೊಲೀಸರ ಪಾತ್ರ ಬಹುಮುಖ್ಯವಾಗಿತ್ತು. ಹಗಲು ರಾತ್ರಿ ಎನ್ನದೆ ನಿರಂತರ ಕರ್ತವ್ಯ ನಿರ್ವಹಿಸಿದ ಪರಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

