
ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ : ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸದಾಶಿವನಗರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ಸಂಭವಿಸಿದೆ.
ಸುಮಿತ್ರಾ ಗೋಕಾಕ (19) ಆತ್ಮಹತ್ಯೆಗೆ ಶರಣಾದ ಯುವತಿ. ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಮೂಲದ ವಿದ್ಯಾರ್ಥಿನಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದಳು. ಬೆಳಗಾವಿ ಸದಾಶಿವನಗರದ ಡಾ ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇದ್ದ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಬೆಳಿಗ್ಗೆ ಉಪಹಾರ ಸೇವಿಸಿ ಕೊಠಡಿಗೆ ತೆರಳಿದ್ದ ವಿದ್ಯಾರ್ಥಿನಿ ನಂತರ ಬಾಗಿಲು ಬಂದ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಹಪಾಠಿಗಳು ಬಾಗಿಲು ಬಡಿದರು ತೆರೆಯದಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಯುವತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.