Select Page

Advertisement

ರಾಯಬಾಗ : ಬಾಲಕಿ ಮೇಲೆ ಅತ್ಯಾಚಾರ ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

ರಾಯಬಾಗ : ಬಾಲಕಿ ಮೇಲೆ ಅತ್ಯಾಚಾರ ; ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ

ಬೆಳಗಾವಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ಎಸಗಿದ್ದು ಮಾತ್ರವಲ್ಲದೆ ಕೊಲೆಗೈದು ಬಾವಿಗೆ ಹಾಕಿ ಕ್ರೌರ್ಯ ಮೆರೆದಿದ್ದ ಆರೋಪಿಗೆ ಕೊನೆಗೂ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಅಪರಾಧಿಗೆ 10 ಲಕ್ಷ ರೂಪಾಯಿ ದಂಡದ ಜೊತೆಗೆ ಮರಣದಂಡನೆ ಶಿಕ್ಷೆ ವಿಧಿಸಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ-1 ಇಂದು ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು ತೀರ್ಪು ನೀಡಿದ್ದಾರೆ.

ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಭರತೇಶ ಮಿರ್ಜಿ(28) ಎಂಬಾತ ಕಠಿಣ ಶಿಕ್ಷೆಗೆ ಗುರಿಯಾದ ಅಪರಾಧಿ. 2019ರ ಸೆಪ್ಟೆಂಬರ್ 10ರಂದು ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

ಮನೆಯಿಂದ ಚಾಕಲೇಟ್ ತರಲು ಹೊರ ಹೋಗಿದ್ದ ಬಾಲಕಿ(8 ವರ್ಷ)ಯನ್ನು ಅಪರಾಧಿ ಭರತೇಶ ಮಿರ್ಜಿ ಚಾಕ್ಲೆಟ್ ಕೊಡುವುದಾಗಿ ನಂಬಿಸಿ, ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ನಂತರ ಬಾಲಕಿಯನ್ನು ಕೊಂದು, ಸೊಂಟಕ್ಕೆ ಕಲ್ಲು ಕಟ್ಟಿ ಪಕ್ಕದ ಬಾವಿಗೆ ಎಸೆದಿದ್ದ.

ಈ ದುಷ್ಕೃತ್ಯ ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿತ್ತು.
ಮಗಳು ಕಾಣೆಯಾದ ಬಗ್ಗೆ ಪೋಷಕರು ಕುಡಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ನಂತರ ಪ್ರಕರಣದ ಆರೋಪಿ ಭರತೇಶ ಮಿರ್ಜಿ ಎಂದು ತಿಳಿದು, ಆತನನ್ನು ಬಂಧಿಸಿದ್ದರು.

ಅಂದಿನ ಎಸ್ಪಿ ಲಕ್ಷ್ಮಣ ನಿಂಬರಗಿ, ಅಥಣಿ ಡಿವೈಎಸ್ಪಿ ಎಸ್.ವಿ.ಗಿರೀಶ್ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಜಿ.ಎಸ್.ಉಪ್ಪಾರ ಸೇರಿದಂತೆ ಪೊಲೀಸ್ ಸಿಬ್ಬಂದಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಇದೀಗ ಸುದೀರ್ಘ ವಿಚಾರಣೆಯ ನಂತರ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಎಲ್.ವಿ.ಪಾಟೀಲ ಅವರು ವಾದ ಮಂಡಿಸಿದ್ದರು.



Advertisement

Leave a reply

Your email address will not be published. Required fields are marked *

error: Content is protected !!