Select Page

Advertisement

ಕಾರಿನ ಮೇಲೆ‌ ಬಿದ್ದ ಕಂಟೇನರ್ : ಓರ್ವ ಸಾವು, ನಾಲ್ವರಿಗೆ ಗಾಯ

ಕಾರಿನ ಮೇಲೆ‌ ಬಿದ್ದ ಕಂಟೇನರ್ : ಓರ್ವ ಸಾವು, ನಾಲ್ವರಿಗೆ ಗಾಯ

ಸಂಕೇಶ್ವರ : ಹೆದ್ದಾರಿ ಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿಯೊಂದು ಇನ್ನೊಂದು ಬದಿಯ ರಸ್ತೆಯಲ್ಲಿ ಹೊರಟಿದ್ದ ಇನೋವಾ ಕಾರಿನ‌ ಮೇಲೆ ಮುಗುಚಿಬಿದ್ದ

ಪರಿಣಾಮವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ನಿಪ್ಪಾನಿ ಕಡೆಯಿಂದ ಸಂಕೇಶ್ವರ ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿಯು ಬೆಳಗಾವಿ ಕಡೆಯಿಂದ ನಿಪ್ಪಾನಿ ಕಡೆಗೆ ತೆರಳುತ್ತಿದ್ದ ಇನೋವಾ ವಾಹನದ ಮೇಲೆ ಮುಗಚಿಬಿದ್ದ ಪರಿಣಾಮ ಇನೋವಾ ವಾಹನದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರು ಮಹಾರಾಷ್ಟ್ರದ ಸಾತಾರಾ ಜಿಲ್ಲೆಯವರು ಎಂದು ತಿಳಿದಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!