ಶನಿವಾರ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ.! ಏನು ವಿಶೇಷ
ಬೆಳಗಾವಿ : ಬರುವ ಶನಿವಾರ ಅಕ್ಟೋಬರ್. 4 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.
ಶನಿವಾರ ಬೆಳಿಗ್ಗೆ 10: 30 ಕ್ಕೆ ಬೆಳಗಾವಿಗೆ ಆಗಮಿಸಲಿರುವ ಇವರು, 12 : 30 ಕ್ಕೆ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ ಮಾಡುವರು. ಇದೇ ಸಂದರ್ಭದಲ್ಲಿ ವೈದ್ಯರ ವಸತಿ ನಿಲಯಗಳ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಂತರ ಸ್ಮಾರ್ಟ್ ಸಿಟಿ ಅನುದಾನ ಯೋಜನೆಯಲ್ಲಿ ನಿರ್ಮಾಣವಾದ ನಗರ ಸಾರಿಗೆ ಬಸ್ ಉದ್ಘಾಟನೆ ನೆವೇರಿಸಲಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿಯ ನೂತನ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ನಂತರ 4:30 ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.


