ವಿಟಿಯು ನಲ್ಲಿ ಯುಕ್ತಿ – 2024 ಕಾರ್ಯಕ್ರಮ – ಗ್ಯಾತ ಗಾಯಕ ವಿಜಯ್ ಪ್ರಕಾಶ್ ಭಾಗಿ
ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಎರಡು ದಿನಗಳ ವರೆಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ – ಸಂಸ್ಕೃತಿಕ “ಯುಕ್ತಿ – 2024 ”ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಕ್ರಾರ್ಯಕ್ರಮಕ್ಕೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಆಗಮಿಸಲಿದ್ದಾರೆ.
12 ಹಾಗೂ 13 ರಂದು ವಿಟಿಯು ಆವರಣದಲ್ಲಿ ನಡೆಯಲಿರುವ
ರಾಷ್ಟ್ರೀಯ ಮಟ್ಟದ ತಾಂತ್ರಿಕ – ಸಂಸ್ಕೃತಿಕ “ಯುಕ್ತಿ – 2024 ”ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಕಾಲೇಜುಗಳಿಂದ 2,500 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಾರ್ಯಕ್ರಮವನ್ನು ಕುಲಪತಿ ಪ್ರೊ. ವಿದ್ಯಾಶಂಕರ ಎಸ್. ಉದ್ಘಾಟನೆ ಮಾಡಲಿದ್ದಾರೆ.
ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಟೆಕ್, ಮನರಂಜನೆ, ಮ್ಯಾನೆಜ್‌ಮೆಂಟ್, ಪೇಪರ್ ಪ್ರಸೆಂಟೆಷನ್, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ. ಇನ್ನೂ ಶನಿವಾರ 13 ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದ್ದು ಸಂಜೆ 6 ಕ್ಕೆ ಕಾಲೇಜು ಆವರಣದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಮನರಂಜನಾ ಕಾರ್ಯಕ್ರಮ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


