ರಂಗೇರಿದ ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆ : ಸಂಜೆ ಫಲಿತಾಂಶ

ಬೆಳಗಾವಿ : ತೀವ್ರ ಕುತೂಹಲ ಮೂಡಿಸಿರುವ ಅಥಣಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
12 ಸದಸ್ಯ ಸ್ಥಾನಗಳಿಗೆ ಭಾನುವಾರ ಮತದಾನ ನಡೆಯುತ್ತಿದ್ದು ಸಂಜೆಯೇ ಫಲಿತಾಂಶ ಪ್ತಕಟವಾಗುವ ಸಾಧ್ಯತೆ ಇದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಬೆಂಬಲಿತ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಬೆಳಿಗ್ಗೆಯೇ ಶಾಸಕ ಲಕ್ಷ್ಮಣ ಸವದಿ, ರಾಜು ಕಾಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


