Athani – ಮತದಾರನ ಬಲಿಪಡೆದ ಕಾರ್ಖಾನೆ ಚುನಾವಣೆ ; ಪೊಲೀಸರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ
ಅಥಣಿ : ಪೊಲೀಸರ ನಿರ್ಲಕ್ಷ್ಯದಿಂದ ಅಮಾಯಕ ವ್ಯಕ್ತಿ ಬಲಿಯಾದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.
ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿ ಮರಳಿ ಮನೆಗೆ ಬರುವ ವೇಳೆ ವಾಹನ ದಟ್ಟನೆ ಉಂಟಾಗಿ ಟ್ರಕ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಸಪ್ತಸಾಗರ ಗ್ರಾಮದ ರಾಜೇಸಾಬ್ ಜಮಾದಾರ ಮೃತ ದುರ್ದೈವಿ. ಸಹಕಾರಿ ಕಾರ್ಖಾನೆ ಚುನಾವಣೆ ನೆಪದಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಸೇರಿದಂತೆ ಪೊಲೀಸರ ನಿರ್ಲಕ್ಷ್ಯಕ್ಕೆ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದು ಎರಡು ಗಂಟೆಯಾದರೂ ಆಂಬ್ಯುಲೆನ್ಸ್ ತಲುಪಲು ಸಾಧ್ಯವಾಗಲಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ. ವ್ಯಕ್ತಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗಿಲ್ಲ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಹರಸಾಹಸ ಪಟ್ಟು ಸ್ಥಳೀಯರು ಆಸ್ಪತಗೆ ಸಾಗಿಸಿದ್ದರಾದರೂ ಚಿಕಿತ್ಸೆ ಫಲಕಾರಿಯಾಗಿದೆ ವ್ಯಕ್ತಿ ಸಾವಣಪ್ಪಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


