ಬೆಳಗಾವಿ ವಾಯ್ಸ್ ವರದಿಗೆ ಮಿಡಿದ ಹೃದಯ : ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಪ್ಪ ಸವದಿ ಸಹಾಯಹಸ್ತ…!
ಬೆಳಗಾವಿ : ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿ ಮನೆಗೆ ವಾಪಸ್ ಮರಳುವ ವೇಳೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಸಹಾಯಹಸ್ತ ಚಾಚಿದ್ದಾರೆ.
“ Athani – ಮತದಾರನ ಬಲಿಪಡೆದ ಕಾರ್ಖಾನೆ ಚುನಾವಣೆ ; ಪೊಲೀಸರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ” ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳಗಾವಿ ವಾಯ್ಸ್ ವರದಿ ಪ್ರಕಟಿಸಿತ್ತು. ಸಧ್ಯ ಮಾನವೀಯ ನೆಲೆಗಟ್ಟಿನಲ್ಲಿ ಮೃತ ಕುಟುಂಬದವರಿಗೆ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ 1 ಲಕ್ಷ ರೂ. ಧನ ಸಹಾಯ ನೀಡಿದ್ದಾರೆ.
ಬುಧವಾರ ತಾಲೂಕಿನ ಸಪ್ತಸಾಗರ ಗ್ರಾಮದ ರಾಜೇಸಾಬ್ ಜಮಾದಾರ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಇವರು, ಹಣ ಸಹಾಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರಾಜು ನಾಡಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


