Select Page

Advertisement

ಇವ ನಮ್ಮ ಬೆಳಗಾವಿ “ಶಿವಕುಮಾರ” ; ಶಾಸಕರ ಮುದ್ದಾದ ಮಗನಿಗೆ ನಾಮಕರಣ ನೆರವೇರಿಸಿದ ಡಿಕೆಶಿ…!

ಇವ ನಮ್ಮ ಬೆಳಗಾವಿ “ಶಿವಕುಮಾರ” ; ಶಾಸಕರ ಮುದ್ದಾದ ಮಗನಿಗೆ ನಾಮಕರಣ ನೆರವೇರಿಸಿದ ಡಿಕೆಶಿ…!




ಬೆಂಗಳೂರು : ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ ಅವರ ಪುತ್ರನಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾಮಕರಣ ಮಾಡಿದರು.

ಶಾಸಕರ ಪುತ್ರನಿಗೆ ಡಿಕೆಶಿ ಅವರು ಶಿವಕುಮಾರ ಎಂದು ನಾಮಕರಣ ಮಾಡಿದರು. ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಪೋಸ್ಟ್ ಮಾಡಿದ್ದು, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!
ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!

ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!