
ಎಂಇಎಸ್ ಪುಂಡನ ಜೊತೆ ಸೆಲ್ಫಿ ಪಡೆದ ಇನ್ಸ್ಪೆಕ್ಟರ್ ವಿರುದ್ಧ ಕ್ರಮ : ಡಾ. ಪರಮೇಶ್ವರ್

ಬೆಂಗಳೂರು : ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಣೆ ಮಾಡುತ್ತಿದ್ದರೆ ಇದಕ್ಕೆ ಕಡಿವಾಣ ಹಾಕಬೇಕಿದ್ದ ಪೊಲೀಸರೇ ಪುಂಡರ ಜೊತೆ ಸೆಲ್ಫಿ ತಗೆಸಿಕೊಂಡಿದ್ದು ಕನ್ನಡಿಗರನ್ನು ಕೆರಳಿಸಿದೆ.
ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಎಂಇಎಸ್ ಮುಖಂಡ ಶುಭಂ ಶೆಳಕೆ ಜೊತೆ ಫೋಟೋ ತಗೆದುಕೊಂಡಿದ್ದರು.
ಈ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು. ಕನ್ನಡ ನಾಡಿನ ಬದ್ಧತೆ ಹಾಗೂ ತತ್ವರ ವಿರುದ್ಧ ಹೋಗುವ ಯಾವುದೇ ಅಧಿಕಾರಿ ಹಾಗೂ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಎಂಇಎಸ್ ಮುಖಂಡನ ಜೊತೆ ಸೆಲ್ಫಿ ಪಡೆದ ಇನ್ಸ್ಪೆಕ್ಟರ್ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಪೊಲೀಸರ ಈ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತರು ಸಿಪಿಐ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.