ಮಹಾಂತೇಶ್ ಬೀಳಗಿ ಮೃತದೇಹ ಹುಟ್ಟೂರಿಗೆ : ರಾಮದುರ್ಗದಲ್ಲಿ ಅಂತ್ಯಕ್ರಿಯೆ

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ಇಂದು ಹುಟ್ಟೂರಾದ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ನೆರವೇರಲಿದೆ.
ನಿನ್ನೆ ಸಂಜೆ ವಿಜಯಪುರದಿಂದ ಕಲಬುರಗಿಗೆ ತೆರಳುವ ವೇಳೆ ಜೀವರ್ಗಿ ಬಳಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಜೊತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟ.
ಈಗಾಗಲೇ ಮಹಾಂತೇಶ್ ಬೀಳಗಿ ಅವರ ಮೃತದೇಹವನ್ನು ರಾಮದುರ್ಗ ಮನೆಗೆ ತರಲಾಗಿದ್ದು ಇಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಸಂಜೆಯವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲು ತಯಾರಿ ನಡೆಸಿದ್ದಾರೆ.


