ಭೀಕರ ರಸ್ತೆ ಅಪಘಾತ ; ಕೆಎಲ್ಇ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಚಿಕ್ಕೋಡಿ : ಪಟ್ಟಣದ ವಿಶ್ವೇಶ್ವರಯ್ಯ ಬಡಾವಣೆ ಬಳಿಯ ಬಾಣಂತಿಕೋಡಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದು, ಹಿಂಬದಿಯ ಸವಾರರಿಬ್ಬರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಕೆಎಲ್‍ಇ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಚಿಂಚಣಿ ಗ್ರಾಮದ ಸಮರ್ಥ ಸುಖದೇವ ಅಪ್ಪಾಜಿಗೋಳ (20) ಮೃತಪಟ್ಟ ದುರ್ದೈವಿ.
ಸ್ನೇಹಿತರ ಜೊತೆಗೂಡಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ಬೈಕ್ ಆಯತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಈ ದುರ್ಘಟನೆ ಸಂಭವಿಸಿದೆ.
ಅರವಿಂದ ಶಂಕರ ಮ್ಯಾಗೇರಿ (19) ಹಾಗೂ ಖಡಕಲಾಟ ಗ್ರಾಮದ ಸಚಿನ ಮಹೇಶ ಬಡಕೆ (19) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಚಿಕ್ಕೋಡಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


